ಕರ್ನಾಟಕ ಸರ್ಕಾರ ಸಚಿವಾಲಯ ಕ್ಲಬ್Karnataka Government Secretariat Club
ROOPANTARA PRESENTS
ರಾಮಧಾನ್ಯ- RAMADHYANYA DATE : 04TH JULY 2017
VENUE: KGS CLUB CUBBON PARK BANGALORE
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1509-1609) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು. ಕನಕದಾಸರು ಮತ್ತು ಪುರಂದರದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದ ಅಶ್ವಿನಿ ದೇವತೆಗಳೆಂದು ಬಣ್ಣಿಸಲಾಗಿದೆ. ಕನಕದಾಸರು ದಂಡನಾಯಕರಾಗಿದ್ದು ಯುದ್ದವೊಂದರಲ್ಲಿ ಸೋತ ಅವರಿಗೆ ಉಪರತಿ/ವೈರಾಗ್ಯ ಉಂಟಾಗಿ, ಹರಿಭಕ್ತರಾದರಂತೆ.
ರಾಮಧಾನ್ಯಚರಿತೆರಾಮಧಾನ್ಯಚರಿತ್ರೆ ಭಾಮಿನೀ ಷಟ್ಪದಿಯಲ್ಲಿ ರಚಿತವಾಗಿರುವ 156 ಪದ್ಯಗಳನ್ನು ಒಳಗೊಂಡಿದೆ. ಈ ಕೃತಿಯಲ್ಲಿ ಧನಿಕರ ಆಹಾರಧಾನ್ಯ ಅಕ್ಕಿ ಹಾಗೂ ಕೆಳವರ್ಗದವರ ಆಹಾರಧಾನ್ಯವೆಂದು ಪರಿಭಾವಿಸಲಾಗಿರುವ ರಾಗಿಯ ನಡುವಿನ ಸಂಭಾಷಣೆಯ ಮೂಲಕ ರಾಗಿ ಹೇಗೆ ತನ್ನ ಔನ್ನತ್ಯವನ್ನು ಸಾಬೀತು ಪಡಿಸುತ್ತದೆ ಹಾಗೂ ರಾಮಧಾನ್ಯವೆಂಬ ಹೆಸರು ಪಡೆಯುತ್ತದೆ ಎಂಬುದನ್ನು ನಿರೂಪಿಸಲಾಗಿದೆ. ಇದರಲ್ಲಿ ಯುದ್ಧದ ಸನ್ನಿವೇಶ ಇಲ್ಲವಾದರೂ ವೀರರಸದ ಮಾತುಗಳಿಗೇನೂ ಕೊರತೆಯಿಲ್ಲ.
ನುಡಿಗೆ ಹೇಸದ ಭಂಡ ನಿನ್ನೊಳು ಕೊಡುವರೇ ಮಾರುತ್ತರವ ಕಡುಜಡವಲಾ, ನಿನ್ನೊಡನೆ ಮಾತೇಕೆ?
ಹೆಣದ ಬಾಯಿಗೆ ತುತ್ತು ನೀನಹೆ ನಿನ್ನ ಜನ್ಮ ನಿರರ್ಥಕವಲಾ
ಎಲವೂ ನೀನೆಲ್ಲಿಹೆಯೋ ನಿನ್ನಯ ಬಳಗವದು..
ಮುಂತಾದ ಮಾತುಗಳಲ್ಲಿ ಕನಕದಾಸರು ರಾಗಿಯ ನೆಪ ಹಿಡಿದು ತಮ್ಮದೇ ಆತ್ಮಕಥೆಯನ್ನು ಹೇಳುತ್ತಿರುವಂತೆ ತೋರುತ್ತದೆ. ಸಮಾಜದ ಮೇಲ್ವರ್ಗದವರ ಆಹಾರ ಧಾನ್ಯ ಭತ್ತ ಹಾಗೂ ಕೆಳವರ್ಗದವರ ಆಹಾರ ಧಾನ್ಯ ರಾಗಿಯ ನಡುವಿನ ಸಂಭಾಷಣೆಯನ್ನು ನಿರೂಪಿಸುವ ಕನಕದಾಸರ ಸೃಜನಶೀಲತೆ ಅತಿಶಯ. ಒಂದು ರೀತಿಯಲ್ಲಿ ರಾಮಧಾನ್ಯಚರಿತ್ರೆ ಇಂದಿನ ಬಂಡಾಯ ಸಾಹಿತ್ಯದ ಬೇರು, ನವ್ಯೋತ್ತರದ ಸೂರು ಎಂದರೆ ಬಹುಶ: ತಪ್ಪಾಗಲಾರದು. [ Source : Wikipedia]
GLIMPSES OF 04th JULY 2017 PLAY
Tumbaa chennagi moodi bandide.
ReplyDeleteEllarigu danyavaadagalu.
ತುಂಬಾ ಚೆನ್ನಾಗಿ ಮೂಡಿ ಬಂದಿತು
ReplyDelete