ಸಂಕ್ರಾಂತಿ ಸುಗ್ಗಿ ಸಂಭ್ರಮ 2025
ಆತ್ಮೀಯರೆ,
ಮಕರ ಸಂಕ್ರಾಂತಿ ಹಬ್ಬದ ಹಾರ್ಧಿಕ ಶುಭಾಶಯಗಳು
ಕರ್ನಾಟಕ ಸರ್ಕಾರ ಸಚಿವಾಲಯ ಕ್ಲಬ್ ವತಿಯಿಂದ ಸಂಕ್ರಾಂತಿ ಹಬ್ಬವನ್ನು ನಾಡಿನ ಪ್ರಸಿದ್ದ ಜಾನಪದ ಕಲಾ ತಂಡಗಳೊಂದಿಗೆ ವಿಶೇಷ ರೀತಿಯಲ್ಲಿ ದಿನಾಂಕ : 13.01.2025 ರಂದು ಸೋಮವಾರ ಮಧ್ಯಾಹ್ನ 1:30ಕ್ಕೆ ಕ್ಲಬ್ ಆವರಣದಲ್ಲಿ ಆಚರಿಸಲಾಗುತ್ತಿದೆ ...
ಮುಂದುವರೆದು, ಸಂಕ್ರಾಂತಿ ಹಬ್ಬದ ಸಂಪ್ರದಾಯದನ್ವಯ ಕಬ್ಬು, ಗೆಣಸು, ಕಡಲೆಕಾಯಿ, ಅವರೆ ಕಾಯಿ ಹಾಗೂ ಎಳ್ಳು -ಬೆಲ್ಲಗಳ ಮಳಿಗೆಗಳು ಇರಲಿವೆ ... ಅಲ್ಲದೆ ಕಾರ್ಯಕ್ರಮದಲ್ಲಿ ಎಳ್ಳು-ಬೆಲ್ಲ ವಿತರಣೆ ಮಾಡಲಾಗುವುದು ...
ಆದುದರಿಂದ ಈ ವಿಜೃಂಭಣೆಯ ಕಾರ್ಯಕ್ರಮದಲ್ಲಿ ತಾವು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿ 🙏
ನಾಗಭೂಷಣ ಎಲ್.ಎನ್
ಗೌರವ ಕಾರ್ಯದರ್ಶಿ ಕರ್ನಾಟಕ ಸರ್ಕಾರ ಸಚಿವಾಲಯ ಕ್ಲಬ್
ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರುಗಳು